Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:14 - ಕನ್ನಡ ಸಮಕಾಲಿಕ ಅನುವಾದ

14 ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:14
27 ತಿಳಿವುಗಳ ಹೋಲಿಕೆ  

ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.


“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.


ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.


ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,


ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.


ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.


ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.


ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ. ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.


ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.


ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.


ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು