Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:2 - ಕನ್ನಡ ಸಮಕಾಲಿಕ ಅನುವಾದ

2 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:2
35 ತಿಳಿವುಗಳ ಹೋಲಿಕೆ  

ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.


ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.


ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.


ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು.


ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.


ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ.


ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.


ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.


ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು