Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:4 - ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ನಾನು ಅವರ ಉಪಾಯಗಳನ್ನೇ ಬಳಸಿಕೊಳ್ಳಲು ನಿರ್ಧರಿಸಿದೆನು. ಅವರು ಬಹು ಭಯಪಡುವ ವಸ್ತುಗಳಿಂದಲೇ ಅವರನ್ನು ಶಿಕ್ಷಿಸಲು ತೀರ್ಮಾನಿಸಿದೆನು. ಎಕೆಂದರೆ ನಾನು ಅವರನ್ನು ಕರೆದರೂ ಅವರು ಕಿವಿಗೊಡಲಿಲ್ಲ. ನಾನು ಅವರೊಂದಿಗೆ ಮಾತಾಡಿದರೂ ಅವರು ಕೇಳಲಿಲ್ಲ. ಆದ್ದರಿಂದ ನಾನು ಅವರಿಗೆ ಅದನ್ನೇ ಮಾಡುವೆನು. ನಾನು ಯಾವದನ್ನು ಕೆಟ್ಟದೆಂದು ಪರಿಗಣಿಸಿದ್ದೆನೋ ಅದನ್ನೇ ಅವರು ಮಾಡಿದರು. ನಾನು ಇಷ್ಟಪಡದ ಸಂಗತಿಗಳನ್ನು ಅವರು ಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:4
24 ತಿಳಿವುಗಳ ಹೋಲಿಕೆ  

ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.


ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.


ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.


ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು