ಯೆಶಾಯ 66:7 - ಕನ್ನಡ ಸಮಕಾಲಿಕ ಅನುವಾದ7 “ಅವಳಿಗೆ ನೋವು ಆಗುವುದಕ್ಕಿಂತ ಮುಂಚೆಯೇ ಹೆತ್ತಳು. ವೇದನೆ ಬರುವುದಕ್ಕಿಂತ ಮುಂಚೆಯೇ ಗಂಡು ಕೂಸು ಪಡೆದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಹಾ, ಬೇನೆ ತಿನ್ನುವದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡನ್ನು ಹಡೆದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7-8 “ಪ್ರಸವವೇದನೆಗಿಂತ ಮೊದಲು ಸ್ತ್ರೀಯು ಮಗುವನ್ನು ಹೆರುವದಿಲ್ಲ. ತಾನು ಹೆರುವ ಶಿಶುವನ್ನು ನೋಡುವ ಮೊದಲು ಸ್ತ್ರೀಯು ಪ್ರಸವವೇದನೆ ಅನುಭವಿಸಲೇಬೇಕು. ಅದೇ ರೀತಿಯಲ್ಲಿ ಒಂದೇ ದಿನದಲ್ಲಿ ಹೊಸ ಭೂಮ್ಯಾಕಾಶಗಳು ಉಂಟಾಗುವದನ್ನು ಯಾರೂ ನೋಡುವದಿಲ್ಲ. ಒಂದೇ ದಿವಸದಲ್ಲಿ ಉಂಟಾದ ಜನಾಂಗದ ಬಗ್ಗೆ ಯಾರೂ ಕೇಳಲಿಲ್ಲ. ದೇಶವು ಪ್ರಸವವೇದನೆಯಂಥ ಬೇನೆಯನ್ನು ಅನುಭವಿಸಬೇಕು. ಆ ಬಳಿಕ ದೇಶವು ಹೊಸ ಜನಾಂಗವೆಂಬ ಮಕ್ಕಳನ್ನು ಹೆರುವುದು. ಅಧ್ಯಾಯವನ್ನು ನೋಡಿ |