Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:9 - ಕನ್ನಡ ಸಮಕಾಲಿಕ ಅನುವಾದ

9 ನಾನು ಪ್ರಸವಕ್ಕೆ ತಂದಮೇಲೆ ಹೆರಿಗೆಯಾಗದಂತೆ ತಡೆಯುವೆನೋ?” ಎಂದು ಯೆಹೋವ ದೇವರು ಹೇಳುತ್ತಾನೆ. “ನಾನು ಪ್ರಸವಕ್ಕೆ ತಂದಮೇಲೆ, ಪ್ರಸವವಾಗದೆ ಇರಲು ಗರ್ಭ ಮುಚ್ಚಿಬಿಡುವೆನೇ?” ಎಂದು ನಿನ್ನ ದೇವರು ಕೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. “ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವಿಸಗೊಡದೆ ಹೋದೇನೋ ಎಂದು ಯೆಹೋವನು ಹೇಳುತ್ತಾನೆ. ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ ಎಂದು ನಿನ್ನ ದೇವರು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದೇ ರೀತಿಯಲ್ಲಿ ಹೊಸದಾಗಿ ಹುಟ್ಟುವ ಕಾರಣದಿಂದಲೇ ನಾನು ಬೇನೆಯನ್ನು ನಿಮಗೆ ಕೊಡುವೆನು.” ಯೆಹೋವನು ಹೇಳುವುದೇನೆಂದರೆ: “ನಾನು ನಿಮಗೆ ಹೆರಿಗೆ ಬೇನೆಯನ್ನು ಕೊಡದೆಹೋದರೆ ನೀವು ಹೊಸ ಜನಾಂಗವಾಗಲಾರಿರಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:9
3 ತಿಳಿವುಗಳ ಹೋಲಿಕೆ  

ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು