Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ, ಇಲ್ಲವೆ ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಆಹಾಜನು, “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಆಹಾಜನು, ನಾನು ಕೇಳಿಕೊಳ್ಳುವದೇ ಇಲ್ಲ. ಯೆಹೋವನನ್ನು ಪರೀಕ್ಷಿಸುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಆಹಾಜನು, “ಇದು ಸತ್ಯವೆಂಬುದಕ್ಕೆ ನಾನು ಯಾವ ಗುರುತನ್ನೂ ಕೇಳಲಾರೆ. ನಾನು ಯೆಹೋವನನ್ನು ಪರೀಕ್ಷಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:12
9 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.


ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.


ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.


“ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು