Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:13 - ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಯೆಶಾಯನು ಹೇಳಿದ್ದೇನೆಂದರೆ, “ದಾವೀದನ ಮನೆತನದವರೇ, ಕಿವಿಗೊಟ್ಟು ಕೇಳಿರಿ. ನೀವು ಜನರ ತಾಳ್ಮೆಯನ್ನು ಪರೀಕ್ಷಿಸುತ್ತೀರಿ. ಆದರೆ ಅದು ನಿಮಗೆ ದೊಡ್ಡ ವಿಷಯವಲ್ಲ. ಆದರೆ ಈಗ ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:13
27 ತಿಳಿವುಗಳ ಹೋಲಿಕೆ  

ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’


ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?


ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?


ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.


ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.


ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.


ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.


ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು