Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:14 - ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:14
29 ತಿಳಿವುಗಳ ಹೋಲಿಕೆ  

“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.


ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.


ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.


ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.


ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.


“ ‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


“ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,


ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.


ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು