ಯೆಶಾಯ 7:16 - ಕನ್ನಡ ಸಮಕಾಲಿಕ ಅನುವಾದ16 ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಏಕೆಂದರೆ ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮೊದಲೇ ನೀನು ಭಯಪಡುವ ದೇಶವನ್ನು ಅದರ ಇಬ್ಬರು ಅರಸರು ತ್ಯಜಿಸಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಮಗುವು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವದರೊಳಗೆ, ಯಾವ ಇಬ್ಬರು ರಾಜರಿಗೆ ನೀನು ಹೆದರಿ ನಡುಗುತ್ತೀಯೋ ಅವರ ದೇಶವು ನಿರ್ಜನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಮಗುವು ಒಳ್ಳೆಯದರ ಬಗ್ಗೆ ಮತ್ತು ಕೆಟ್ಟದ್ದರ ಬಗ್ಗೆ ಕಲಿತುಕೊಳ್ಳುವಷ್ಟು ವಯಸ್ಸಾಗುವ ಮೊದಲೇ ಎಫ್ರಾಯೀಮ್ ದೇಶ ಮತ್ತು ಅರಾಮ್ಯರ ದೇಶ ನಿರ್ಜನವಾಗುವುದು. ನೀವೀಗ, ಆ ಇಬ್ಬರು ಅರಸರಿಗೆ ಭಯಪಡುತ್ತಿದ್ದೀರಿ. ಅಧ್ಯಾಯವನ್ನು ನೋಡಿ |