Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ನಿನ್ನ ಮೇಲೆಯೂ, ನಿನ್ನ ಪ್ರಜೆಯ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಅಂದರೆ ಅಶ್ಶೂರದ ಅರಸನ ಕಾಲದಿಂದಲೂ ಬಾರದೆ ಇದ್ದ ದುರ್ದಿನಗಳನ್ನು ಬರಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆದರೆ ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಯಾಕೆಂದರೆ ಆತನು ನಿಮಗೆ ಸಂಕಟದ ಕಾಲವನ್ನು ತಂದೊಡ್ಡುವನು. ಅದು ಎಫ್ರಾಯೀಮ್ ಯೆಹೂದದಿಂದ ಅಗಲಿಹೋದ ಸಮಯದಲ್ಲಾದ ಸಂಕಟದಂತಿರುವುದು. ಆ ಸಂಕಟವು ನಿಮ್ಮ ಜನಗಳಿಗೂ ನಿಮ್ಮ ಪೂರ್ವಿಕರ ಕುಟುಂಬಕ್ಕೂ ಬರುವದು. ದೇವರು ಏನು ಮಾಡುವನು? ಆತನು ಅಶ್ಶೂರದ ರಾಜನನ್ನು ನಿಮಗೆ ವಿರುದ್ಧವಾಗಿ ಯುದ್ಧಕ್ಕೆ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:17
12 ತಿಳಿವುಗಳ ಹೋಲಿಕೆ  

“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು