ಯೆಶಾಯ 7:2 - ಕನ್ನಡ ಸಮಕಾಲಿಕ ಅನುವಾದ2 ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು. ಅಧ್ಯಾಯವನ್ನು ನೋಡಿ |