ಯೆಶಾಯ 7:20 - ಕನ್ನಡ ಸಮಕಾಲಿಕ ಅನುವಾದ20 ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಗ ಕರ್ತನು ಯೂಫ್ರೆಟಿಸ್ ನದಿಯ ಆಚೆಗಿರುವ ಅಶ್ಶೂರದ ಅರಸನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ ಯೆಹೂದದ ತಲೆಯನ್ನೂ, ಕಾಲಿನ ಕೂದಲನ್ನೂ ಬೋಳಿಸುವನು ಹಾಗೂ ಗಡ್ಡವನ್ನೂ ಸಹ ತೆಗೆದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಅಶ್ಶೂರದವರ ಮೂಲಕ ಯೆಹೂದವನ್ನು ಶಿಕ್ಷಿಸುವನು. ಆತನು ಅಶ್ಶೂರವನ್ನು ಬಾಡಿಗೆಗೆ ತೆಗೆದುಕೊಂಡ ಕ್ಷೌರಿಕನ ಕತ್ತಿಯಂತೆ ತೆಗೆದುಕೊಂಡು ಯೆಹೂದದ ತಲೆಕೂದಲನ್ನೂ ಕೈಕಾಲುಗಳ ಕೂದಲನ್ನೂ ಗಡ್ಡವನ್ನೂ ಬೋಳಿಸಿಬಿಡುವನು. ಅಧ್ಯಾಯವನ್ನು ನೋಡಿ |