ಯೆಶಾಯ 8:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಯೆಹೋವನು ನನಗೆ - ದೊಡ್ಡ ಹಲಿಗೆಯನ್ನು ತೆಗೆದುಕೊಂಡು ಸಾಧಾರಣ ಲಿಪಿಯಿಂದಲೇ ವಿಷಯಸೂಚಕವಾದ ಈ ಪದವನ್ನು ಬರೆ - ಮಹೇರ್ ಶಾಲಾಲ್ ಹಾಷ್ ಬಜ್ [ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ]; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೇಳಿದ್ದೇನೆಂದರೆ, “ಒಂದು ದೊಡ್ಡ ಸುರುಳಿಯನ್ನು ತಂದು ಅದರ ಮೇಲೆ ಹೀಗೆ ಲೇಖನಿಯಿಂದ ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್.’” (ಇದರರ್ಥ: “ಕೊಳ್ಳೆಗೆ ಅವಸರ, ಸೂರೆಗೆ ಆತುರ.”) ಅಧ್ಯಾಯವನ್ನು ನೋಡಿ |