Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:15 - ಕನ್ನಡ ಸಮಕಾಲಿಕ ಅನುವಾದ

15 ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗವಾಗುವರು, ಬೋನಿಗೆ ಸಿಕ್ಕಿ ವಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಷ್ಟೋ ಜನರು ಈ ಬಂಡೆಯಿಂದ ಎಡವಿಬೀಳುವರು. ಅವರು ಬಿದ್ದು ಮುರಿಯಲ್ಪಡುವರು; ಬಲೆಗೆ ಸಿಕ್ಕಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:15
12 ತಿಳಿವುಗಳ ಹೋಲಿಕೆ  

ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.


ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.


ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಕುರುಡರ ಹಾಗೆ ಗೋಡೆಯನ್ನು ತಡವರಿಸುತ್ತೇವೆ. ಕಣ್ಣಿಲ್ಲದವರ ಹಾಗೆ ಮುಟ್ಟಿ ನೋಡುತ್ತೇವೆ. ಮಧ್ಯಾಹ್ನದಲ್ಲಿ ರಾತ್ರಿಯಂತೆ ಎಡವುತ್ತೇವೆ. ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.


ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು