Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:17 - ಕನ್ನಡ ಸಮಕಾಲಿಕ ಅನುವಾದ

17 ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಒಡಂಬಡಿಕೆಯು ಹೀಗಿತ್ತು: ನನ್ನ ದೇವರಾದ ಯೆಹೋವನ ಸಹಾಯಕ್ಕಾಗಿ ನಾನು ಕಾಯುತ್ತಿರುವೆನು. ಯಾಕೋಬನ ಕುಟುಂಬದ ಬಗ್ಗೆ ಯೆಹೋವನು ನಾಚಿಕೊಂಡಿದ್ದಾನೆ. ಅವರ ಕಡೆ ನೋಡಲು ಆತನು ನಿರಾಕರಿಸುತ್ತಾನೆ. ಆದರೆ ನಾನು ಯೆಹೋವನನ್ನು ನಿರೀಕ್ಷಿಸುವೆನು. ಆತನು ನನ್ನನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:17
39 ತಿಳಿವುಗಳ ಹೋಲಿಕೆ  

ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.


ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.


ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ನಿಮ್ಮ ಅಕ್ರಮಗಳೇ, ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿವೆ. ನಿಮ್ಮ ಪಾಪಗಳೇ, ಆತನು ಹೇಳಿದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಸಿವೆ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.


ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.


ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.


ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.


ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


“ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ.


ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.


ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.


“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.


ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.


ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.


ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.


ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.


ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.


ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.


ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.


ಹೀಗಿರಲು, ‘ದೇವರು ಕಾಣುವುದಿಲ್ಲ, ನನ್ನ ವ್ಯಾಜ್ಯವು ದೇವರ ಮುಂದೆ ಇದೆ; ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ, ದೇವರು ನಿನಗೆ ಕಿವಿಗೊಡುವರೋ?


ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು