ಯೆಶಾಯ 8:20 - ಕನ್ನಡ ಸಮಕಾಲಿಕ ಅನುವಾದ20 ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ. ಅಧ್ಯಾಯವನ್ನು ನೋಡಿ |