Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:22 - ಕನ್ನಡ ಸಮಕಾಲಿಕ ಅನುವಾದ

22 ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೇಲಕ್ಕೆ ಕಣ್ಣೆತ್ತಿದರೂ ಭೂವಿುಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವವು; ಕಾರ್ಗತ್ತಲೆಗೆ ತಳ್ಳಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತಮ್ಮ ದೇಶದಲ್ಲಿ ಸುತ್ತಲೂ ನೋಡುವಾಗ ಕೇವಲ ಸಂಕಟಗಳೇ ಕುಗ್ಗಿಸುವ ಕಾರ್ಗತ್ತಲೆಗಳೇ ಕಾಣಿಸುವವು. ಆ ದುಃಖವು ಅವರನ್ನು ದೇಶದಿಂದ ತೊಲಗಿಸಿಬಿಡುವುದು. ಕಾರ್ಗತ್ತಲೆಯಲ್ಲಿ ಸಿಕ್ಕಿಬಿದ್ದ ಜನರಿಗೆ ತಮ್ಮನ್ನು ಬಿಡಿಸಿಕೊಳ್ಳಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:22
25 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.


ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.


ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.


ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,


ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.


ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.


ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.


ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ.


ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.


ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.


ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.”


ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು