ಯೆಶಾಯ 8:4 - ಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಮಗುವು ಅಪ್ಪಾ, ಅಮ್ಮಾ, ಎಂದು ಕೂಗಬಲ್ಲದಾಗುವದರೊಳಗೆ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |