Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಕರ್ತನು ಪೂರ್ಣಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:7
38 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.


“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.


ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.


ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.


ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.


ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.


ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.


ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.


ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.


ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.


ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:


“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ ‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.


“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.


ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.


ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.


ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.


ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದೆ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.


ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು