ಯೆಶಾಯ 9:1 - ಕನ್ನಡ ಸಮಕಾಲಿಕ ಅನುವಾದ1 ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹಿಂದಿನ ಕಾಲದಲ್ಲಿ, ಜೆಬುಲೋನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿ |
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.