Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:7 - ಕನ್ನಡ ಸಮಕಾಲಿಕ ಅನುವಾದ

7 ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:7
34 ತಿಳಿವುಗಳ ಹೋಲಿಕೆ  

“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.


ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.


ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.


ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.


ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.


‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು