Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:1 - ಕನ್ನಡ ಸಮಕಾಲಿಕ ಅನುವಾದ

1 ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-3 ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:1
39 ತಿಳಿವುಗಳ ಹೋಲಿಕೆ  

ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


“ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.


ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.


ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.


ಆಗ ಕೆರೂಬಿಯರು ಮೇಲಕ್ಕೆತ್ತಲಾದರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಗಳು ಇವೇ.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.


ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು.


ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.


ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.


ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


ಒಂದು ದಿನ ಮಧ್ಯಾಹ್ನ ಸುಮಾರು ಮೂರು ಗಂಟೆಯ ಸಮಯ ಅವನಿಗೆ ಒಂದು ದರ್ಶನವಾಯಿತು. ತನ್ನ ಬಳಿಗೆ ಒಬ್ಬ ದೇವದೂತನು ಬಂದು, “ಕೊರ್ನೇಲ್ಯನೇ!” ಎಂದು ಕರೆಯುವ ದೇವದೂತನನ್ನು ಸ್ಪಷ್ಟವಾಗಿ ಕಂಡನು.


ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.


ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.


ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,


ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.


ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು