Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:10 - ಕನ್ನಡ ಸಮಕಾಲಿಕ ಅನುವಾದ

10 ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮುಖಗಳು ಎಂಥವುಗಳಂದರೆ ಒಂದೊಂದರ [ಮುಂದಿನ] ಮುಖವು ಮನುಷ್ಯನದು, ಬಲಗಡೆಯ ಮುಖವು ಸಿಂಹನದು, ಎಡಗಡೆಯ ಮುಖವು ಹೋರಿಯದು, [ಹಿಂದಿನ] ಮುಖವು ಗರುಡಪಕ್ಷಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಬಲ ಬದಿಯಲ್ಲಿ ಸಿಂಹದ ಮುಖ, ಎಡ ಬದಿಯಲ್ಲಿ ಹೋರಿಯ ಮುಖ, ಹಿಂಬದಿಯಲ್ಲಿ ಗರುಡನ ಮುಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:10
20 ತಿಳಿವುಗಳ ಹೋಲಿಕೆ  

ಒಬ್ಬೊಬ್ಬ ಕೆರೂಬಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯ ಮುಖವು ಮನುಷ್ಯನ ಮುಖ, ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.


ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.


ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ.


ರಣಹದ್ದು ಎತ್ತರಕ್ಕೆ ಹಾರುವುದೂ, ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ?


ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.


ಏಳನೆಯ ದಿವಸದಲ್ಲಿ ಸೂರ್ಯ ಮುಳುಗುವುದಕ್ಕಿಂತ ಮುಂಚೆ ಆ ಊರಿನವರು ಅವನಿಗೆ, “ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲಿಷ್ಠವಾದದ್ದೇನು?” ಎಂದು ಹೇಳಿದರು. ಅವನು ಉತ್ತರವಾಗಿ ಅವರಿಗೆ, “ನೀವು ನನ್ನ ಕಡಸಿನಿಂದ ಉಳದೆ ಇದ್ದರೆ, ನನ್ನ ಒಗಟನ್ನು ಗ್ರಹಿಸಲಾರಿರಿ.”


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು: ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ.


ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ.


ದಕ್ಷಿಣ ದಿಕ್ಕಿನಲ್ಲಿ: ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ.


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ಪ್ರತಿಯೊಂದಕ್ಕೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು.


ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಮನುಷ್ಯನ ಮುಖವು, ಆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು