ಯೆಹೆಜ್ಕೇಲನು 1:27 - ಕನ್ನಡ ಸಮಕಾಲಿಕ ಅನುವಾದ27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆ; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆ; ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಸುತ್ತಿಕೊಂಡಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು. ಅಧ್ಯಾಯವನ್ನು ನೋಡಿ |