Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 1:8 - ಕನ್ನಡ ಸಮಕಾಲಿಕ ಅನುವಾದ

8 ಅವುಗಳ ರೆಕ್ಕೆಗಳ ಕೆಳಗೆ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು. ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು. ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ಈ ರೀತಿಯಲ್ಲಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 1:8
8 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು.


ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.


ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.


ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಅವು ಚಲಿಸುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು ಮತ್ತು ಅವು ಹೋಗುವಾಗ ತಿರುಗಲಿಲ್ಲ.


ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು