Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:1 - ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:1
27 ತಿಳಿವುಗಳ ಹೋಲಿಕೆ  

ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.


ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಯೆಹೋವ ದೇವರು ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು.


ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.


ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.


ಆಗ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನೆಂದರೆ,


ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.


ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.


ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?


ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು