Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:10 - ಕನ್ನಡ ಸಮಕಾಲಿಕ ಅನುವಾದ

10 ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವುಗಳ ರೂಪವು ಹೇಗಿತ್ತೆಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವುಗಳ ರೂಪ ಹೇಗಿತ್ತೆಂದರೆ ಒಂದು‍ ಚಕ್ರದೊಳಗೆ ಇನ್ನೊಂದು ಚಕ್ರ ರಚಿಸಿದಂತಿತ್ತು. ಆ ನಾಲ್ಕು ಚಕ್ರಗಳೂ ಒಂದೇ ಮಾದರಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವುಗಳ ರೂಪವು ಹೇಗಂದರೆ ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು, ಆ ನಾಲ್ಕು ಒಂದೇ ಮಾದರಿಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:10
9 ತಿಳಿವುಗಳ ಹೋಲಿಕೆ  

ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ.


ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು.


ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.


ಒಂದೊಂದು ಪೀಠಕ್ಕೆ ನಾಲ್ಕು ಕಂಚಿನ ಗಾಲಿಗಳೂ, ಕಂಚಿನ ಅಚ್ಚುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಹೂಗಳ ತೋರಣಗಳ ಜೋಡಣೆಗಳಿದ್ದವು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು