ಯೆಹೆಜ್ಕೇಲನು 10:2 - ಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು. ಅಧ್ಯಾಯವನ್ನು ನೋಡಿ |