Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:4
15 ತಿಳಿವುಗಳ ಹೋಲಿಕೆ  

ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,


ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.


ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.


ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.


‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.


ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.


ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.


ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು