Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:5 - ಕನ್ನಡ ಸಮಕಾಲಿಕ ಅನುವಾದ

5 ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:5
19 ತಿಳಿವುಗಳ ಹೋಲಿಕೆ  

ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.


ಇವೆಲ್ಲಾ ಒಳಗೂ, ಹೊರಗೂ ಅಸ್ತಿವಾರಗಳು ಮೊದಲುಗೊಂಡು, ಕಡೇ ವರಸೆಯವರೆಗೂ ಹೊರಗಿರುವ ದೊಡ್ಡ ಅಂಗಳದ ಮಟ್ಟಿಗೂ, ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲಾದ ಬೆಲೆಯುಳ್ಳ ಕೆತ್ತಿದ ಕಲ್ಲುಗಳಾಗಿದ್ದವು.


ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು.


ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.


ಮೋಡಗಳು ನೀರನ್ನು ಸುರಿಸಿದವು. ಆಕಾಶಗಳು ಗುಡುಗಿನಿಂದ ಶಬ್ದಮಾಡಿದವು. ನಿಮ್ಮ ಬಾಣಗಳು ಹಿಂದೆಯೂ ಮುಂದೆಯೂ ಹಾರಿ ಬಂದವು.


ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.


ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.


ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.


ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು