ಯೆಹೆಜ್ಕೇಲನು 10:6 - ಕನ್ನಡ ಸಮಕಾಲಿಕ ಅನುವಾದ6 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ” ಎಂದು ಅಪ್ಪಣೆ ಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೆಂಕಿಯನ್ನು ತೆಗೆದುಕೋ ಎಂದು ಅಪ್ಪಣೆಕೊಡಲು ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನ್ನು ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿ |