Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:9 - ಕನ್ನಡ ಸಮಕಾಲಿಕ ಅನುವಾದ

9 ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದುದು ಕಾಣಿಸಿತು. ಆ ಚಕ್ರಗಳ ಬಣ್ಣ ಪೀತರತ್ನದ ಹಾಗೆ ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನ್ನು ಕಂಡೆನು. ಪ್ರತಿಯೊಬ್ಬ ಕೆರೂಬಿದೂತನ ಬಳಿ ಒಂದು ಚಕ್ರವಿತ್ತು. ಆ ಚಕ್ರಗಳು ಹೊಳೆಯುವ ಹಳದಿ ರತ್ನದಂತೆ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:9
6 ತಿಳಿವುಗಳ ಹೋಲಿಕೆ  

ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.


ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.


ಕೆರೂಬಿಯರಲ್ಲಿ ಅವರ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.


ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು.


ಒಂದೊಂದು ಪೀಠಕ್ಕೆ ನಾಲ್ಕು ಕಂಚಿನ ಗಾಲಿಗಳೂ, ಕಂಚಿನ ಅಚ್ಚುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಹೂಗಳ ತೋರಣಗಳ ಜೋಡಣೆಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು