ಯೆಹೆಜ್ಕೇಲನು 11:15 - ಕನ್ನಡ ಸಮಕಾಲಿಕ ಅನುವಾದ15 “ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇವಿುನವರು ಇಸ್ರಾಯೇಲ್ ವಂಶದವರಲ್ಲಿ ಯಾರಯಾರನ್ನು - ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವಾಸ್ತ್ಯವಾಗಿ ಸಿಕ್ಕಿದೆ ಎಂದು ಹೀನೈಸಿದರೋ ಅವರೆಲ್ಲರೂ ಉಳಿದಿದ್ದಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನ್ನ ಸಹೋದರರ, ನಿನ್ನ ಸ್ವಂತ ಸಂಬಂಧಿಕರ ಮತ್ತು ಇಡೀ ಇಸ್ರೇಲ್ ವಂಶದವರ ಬಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸ್ವಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |