Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:16 - ಕನ್ನಡ ಸಮಕಾಲಿಕ ಅನುವಾದ

16 “ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ನೀನು ಹೀಗೆ ಸಾರು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ದೂರವಾಗಿ ತೊಲಗಿಸಿ ಜನಾಂಗಗಳಲ್ಲಿ ಅನ್ಯದೇಶಗಳೊಳಗೆ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದ್ದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನ್ನ ಜನರನ್ನು ಬಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನ್ನು ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸ್ವಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:16
22 ತಿಳಿವುಗಳ ಹೋಲಿಕೆ  

ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.


ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.


ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.


ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.


ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.


ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.


ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.


ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು