Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:17 - ಕನ್ನಡ ಸಮಕಾಲಿಕ ಅನುವಾದ

17 “ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿಮ್ಮನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:17
27 ತಿಳಿವುಗಳ ಹೋಲಿಕೆ  

“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.


ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.


ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.


ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು