ಯೆಹೆಜ್ಕೇಲನು 11:5 - ಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶಿಸಲು ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದು ನಾನು ಬಲ್ಲೆನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.