Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:11 - ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದನ್ನೂ ನುಡಿ, ‘ನಾನು ನಿಮಗೆ ಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವುದು; ಅವರು ವಲಸೆಯಾಗಿ ಸೆರೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದನ್ನೂ ನುಡಿ - ನಾನು ನಿಮಗೆ ಮುಂಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವದು; ಅವರು ವಲಸೆಯಾಗಿ ಸೆರೆಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:11
11 ತಿಳಿವುಗಳ ಹೋಲಿಕೆ  

ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.


ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.


“ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು