ಯೆಹೆಜ್ಕೇಲನು 12:12 - ಕನ್ನಡ ಸಮಕಾಲಿಕ ಅನುವಾದ12 “ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ತೋಡಿ, ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಆಚೆಗೆ ಸಾಗಿಸುವರು; ಅವನು ಮುಖವನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸುವುದಿಲ್ಲ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು: ಅವನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ಸಾಮಗ್ರಿಗಳನ್ನು ಆಚೆಗೆ ಸಾಗಿಸುವನು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವರಲ್ಲಿನ ಪ್ರಭುವು ಹೆಗಲಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು; ಅವರು ಗೋಡೆಯನ್ನು ತೋಡಿ ಕಂಡಿಯ ಮೂಲಕ ತಮ್ಮ ಸಾಮಾನನ್ನು ಆಚೆಗೆ ಸಾಗಿಸುವರು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂವಿುಯು ಅವನ ಕಣ್ಣಿಗೆ ಕಾಣಿಸದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಿಮ್ಮ ನಾಯಕನು ಗೋಡೆಯಲ್ಲಿ ರಂಧ್ರ ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಯಾವ ಕಡೆಗೆ ಹೋಗುತ್ತಿದ್ದಾನೆಂದು ಅವನ ಕಣ್ಣುಗಳಿಗೆ ಕಾಣಿಸದು. ಅಧ್ಯಾಯವನ್ನು ನೋಡಿ |