Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:15 - ಕನ್ನಡ ಸಮಕಾಲಿಕ ಅನುವಾದ

15 “ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚೆಲ್ಲಾಪಿಲ್ಲಿ ಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು; ಯಾಕೆಂದರೆ ನಾನು ಅವರನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಬೇರೆ ದೇಶಗಳಿಗೆ ಓಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:15
19 ತಿಳಿವುಗಳ ಹೋಲಿಕೆ  

ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”


ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


“ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.


ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”


ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು