Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:16 - ಕನ್ನಡ ಸಮಕಾಲಿಕ ಅನುವಾದ

16 ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಕೆಲವರನ್ನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯ ಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಕೆಲವರನ್ನು ಖಡ್ಗ ಕ್ಷಾಮವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವದಕ್ಕೆ ಅವಕಾಶಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:16
28 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು.


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.


“ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.


ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು