Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:18 - ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನರಪುತ್ರನೇ, ನೀನು ಅನ್ನವನ್ನು ನಡುಕದಿಂದ ತಿಂದು ನೀರನ್ನು ಅದರುಬೆದರಿನಿಂದ ಕುಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಬೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:18
14 ತಿಳಿವುಗಳ ಹೋಲಿಕೆ  

ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.


ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.


ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶವೂ ಆಗುವುದು. ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.


ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು