Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ದ್ರೋಹಿವಂಶದ ಮಧ್ಯದಲ್ಲಿ ವಾಸಿಸುತ್ತೀ, ಆ ವಂಶದವರು ದ್ರೋಹಿಗಳಾಗಿರುವದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:2
46 ತಿಳಿವುಗಳ ಹೋಲಿಕೆ  

ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’” ಎಂದರು.


ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.


ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”


ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ.


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.


ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ.


ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.


ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು