ಯೆಹೆಜ್ಕೇಲನು 12:23 - ಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಗಾದೆಯನ್ನು ನಿಲ್ಲಿಸಿ ಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ - ಕ್ಲುಪ್ತಕಾಲವು ಹತ್ತಿರಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವದು ಸಮೀಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’ ಅಧ್ಯಾಯವನ್ನು ನೋಡಿ |