ಯೆಹೆಜ್ಕೇಲನು 12:28 - ಕನ್ನಡ ಸಮಕಾಲಿಕ ಅನುವಾದ28 “ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ನೀನು ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವದು ಖಂಡಿತ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.’” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿ |