Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:6 - ಕನ್ನಡ ಸಮಕಾಲಿಕ ಅನುವಾದ

6 ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆ ಹಾಕಿ, ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮುಖವನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಗುರುತನ್ನಾಗಿ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆಹಾಕಿ, ಕತ್ತಲಲ್ಲಿ ಹೊತ್ತುಕೊಂಡುಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಕಣ್ಣ ಮುಂದೆ ಅದನ್ನು ಹೆಗಲ ಮೇಲೆ ಹಾಕಿ ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:6
12 ತಿಳಿವುಗಳ ಹೋಲಿಕೆ  

ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’


ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.


ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು.


ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು.


ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.


ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು