ಯೆಹೆಜ್ಕೇಲನು 12:7 - ಕನ್ನಡ ಸಮಕಾಲಿಕ ಅನುವಾದ7 ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಾನನ್ನು ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಈಚೆಗೆ ಹಾಕಿ ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ ಅವರ ಕಣ್ಣಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನ್ನು ತಂದು ಹೊರಗಿಟ್ಟೆನು. ಸಾಯಂಕಾಲ ನನ್ನ ಕೈಗಳಿಂದ ಗೋಡೆಯಲ್ಲಿ ರಂಧ್ರ ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನ್ನು ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನ್ನನ್ನು ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು. ಅಧ್ಯಾಯವನ್ನು ನೋಡಿ |