ಯೆಹೆಜ್ಕೇಲನು 13:11 - ಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದಕಾರಣ, ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ, ‘ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವುದು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದಕಾರಣ ನೀನು ಸುಣ್ಣಬಳಿಯುವವರಿಗೆ ಹೀಗೆ ನುಡಿ - ವಿಪರೀತ ಮಳೆಯಾಗಿ ಗೋಡೆಯು ಬಿದ್ದುಹೋಗುವದು, ಆನೆಕಲ್ಲುಗಳು ಸುರಿಯುವವು; ಬಿರುಗಾಳಿಯು ಗೋಡೆಯನ್ನು ಒಡೆದುಹಾಕುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಬಲವಾದ ಮಳೆಯನ್ನು ಕಳುಹಿಸುವೆನು. ಗಾಳಿಯು ಬಲವಾಗಿ ಬೀಸಿ ಸುಂಟರಗಾಳಿಯು ಬರುವುದು. ಆಗ ಗೋಡೆಯು ಮುರಿದುಬೀಳುವುದು. ಅಧ್ಯಾಯವನ್ನು ನೋಡಿ |