ಯೆಹೆಜ್ಕೇಲನು 13:16 - ಕನ್ನಡ ಸಮಕಾಲಿಕ ಅನುವಾದ16 ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಸ್ರಾಯೇಲಿನ ಪ್ರವಾದಿಗಳೇ, ಕ್ಷೇಮವಿಲ್ಲದಿದ್ದರೂ ಕ್ಷೇಮವಾಗುವದೆಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇವಿುನ ವಿಷಯವಾಗಿ ಪ್ರವಾದಿಸಿದ್ದೀರಲ್ಲಾ; ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು. ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಬಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನ್ನು ಕಂಡರು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು. ಅಧ್ಯಾಯವನ್ನು ನೋಡಿ |