ಯೆಹೆಜ್ಕೇಲನು 13:18 - ಕನ್ನಡ ಸಮಕಾಲಿಕ ಅನುವಾದ18 ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ ಉದ್ದವಾದವರಿಗೂ ಗಿಡ್ಡಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ. ಅಧ್ಯಾಯವನ್ನು ನೋಡಿ |