ಯೆಹೆಜ್ಕೇಲನು 13:20 - ಕನ್ನಡ ಸಮಕಾಲಿಕ ಅನುವಾದ20 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಗಳನ್ನು ನಾನು ಬಿಡಿಸಿಬಿಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ನೀವು ಆ ಬಟ್ಟೆಯ ತೋಳುಪಟ್ಟಿಯನ್ನು ಜನರು ಬೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನ್ನು ಸ್ವತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನ್ನು ಹರಿದುಹಾಕುವೆನು. ಆಗ ಜನರು ನಿಮ್ಮ ಬಂಧನದಿಂದ ವಿಮುಕ್ತರಾಗುವರು. ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು. ಅಧ್ಯಾಯವನ್ನು ನೋಡಿ |